ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಮದ್ದೂರು ಉದ್ವಿಗ್ನಗೊಂಡಿದೆ. ಘಟನೆ ಖಂಡಿಸಿ ಸಾಗರೋಪಾದಿಯಲ್ಲಿ ಸೇರಿದ್ದ ಜನ ಕೋಮು ಗಲಭೆಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.ಹೀಗಾಗಿ ಸ್ಥಳದಲ್ಲಿ ನಿಷೇದಾಜ್ಞೆ ಜಾರಿಗೆ ತರಲಾಗಿತ್ತು. ಆದರೂ ಇಂದು ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಘಟನೆ ನಡೆದ ಸ್ಥಳದಲ್ಲಿ ಜಮಾಯಿಸಿದ ಜನರ ಗುಂಪು ಕೆಲ ರಸ್ತೆಗಳಲ್ಲಿ ಅಳವಡಿಸಲಾಗಿದ್ದ ಅನ್ಯ ಕೋಮಿನ ಬಾವುಟಗಳನ್ನು ತೆರವುಗೊಳಿಸಿ ತಮ ಆಕ್ರೋಶ ಹೊರಹಾಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

