Breaking News

ಚಲಿಸುತ್ತಿದ್ದ ಕಾರಿನ ಸನ್‌ರೂಫ್‌ನಿಂದ ಹೊರಗೆ ತಲೆಹಾಕಿ ನಿಂತಿದ್ದ ಬಾಲಕನಿಗೆ ಗಂಭೀರ ಗಾಯ.

ನಗರದ ಜಿಕೆವಿಕೆ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಸನ್‌ರೂಫ್‌ನಿಂದ ಹೊರಗೆ ನಿಂತಿದ್ದ ಚಿಕ್ಕ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ತಂದೆಯ ನಿರ್ಲಕ್ಷ್ಯದಿಂದ ನಡೆದ ಈ ದುರ್ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಅಪಾಯದ ಬಗ್ಗೆ ಅರಿವಿಲ್ಲದ ಬಾಲಕನ ತಲೆ ನೇರವಾಗಿ ಬ್ಯಾರಿಕೇಡ್‌ಗೆ ಬಡಿದಿದ್ದು, ತೀವ್ರ ಆಘಾತದಿಂದ ಆತ ತಕ್ಷಣವೇ ಕಾರಿನೊಳಗೆ ಕುಸಿದು ಬಿದ್ದಿದ್ದಾನೆ. ತಲೆಗೆ ಗಂಭೀರ ಪೆಟ್ಟಾಗಿರುವ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ನಂತರ, ವಾಹನದ ಚಾಲಕ ಕೂಡಲೇ ಪೊಲೀಸರ ಸಂಪರ್ಕಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *