ನೂರಾರು ಪ್ರತಿಭಟನಾಕಾರರು ಕಚೇರಿಗೆ ನುಗ್ಗಿದ ನಂತರ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ರಾಜೀನಾಮೆ ನೀಡಿದ್ದಾರೆ. ಸೆಪ್ಟೆಂಬರ್ 4 ರಂದು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ವಾಟ್ಸಾಪ್ ಮತ್ತು ಎಕ್ಸ್ ಸೇರಿದಂತೆ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಸರ್ಕಾರ ನಿಷೇಧಿಸಿತ್ತು.ಸರ್ಕಾರದ ಈ ನಿರ್ಧಾರ ಖಂಡಿಸಿ ಜೆನ್ ಝಡ್ ನೇತೃತ್ವದ ಪ್ರತಿಭಟನೆಗಳು ಪ್ರಾರಂಭವಾಗಿದ್ದವು. ಪ್ರತಿಭಟನೆ ಬೆನ್ನಲ್ಲೇ ಸರ್ಕಾರ ನಿಷೇಧ ಹಿಂತೆಗೆದುಕೊಂಡಿತ್ತು. ಈ ವೇಳೆಗಾಗಲೇ ರಾಜಕೀಯ ಮತ್ತು ಹಿಂಸಾತ್ಮಕ ರೂಪ ಪಡೆದುಕೊಂಡಿದ್ದವು.
bigtvnews | Hubli Dharwad News | Kannada News | Karnataka News Hubli News | News In Hubli | Local news

