Breaking News

ಪ್ರೇಮವೈಫಲ್ಯದಿಂದ ಮನನೊಂದು ನೇಣಿಗೆ ಕೊರಳೊಡ್ಡಿದ ಯುವತಿ.

ಪ್ರೇಮವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಮನೆಯಲ್ಲಿ ನೇಣುಬಿಗಿದು ಸಾವಿಗೆ ಶರಣಾದ ಘಟನೆ ರಾಜಾಜಿನಗರದ ಗಾಯತ್ರಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಲತಾ(25) ನೇಣುಬಿಗಿದುಕೊಂಡ ಯುವತಿ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದವಳು ಮತ್ತು ಮಂಡ್ಯ ಜಿಲ್ಲೆಯ ಮೂಲದ ರಂಜಿತ್ ಎಂಬ ಯುವಕನನ್ನು ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದಳು.ಇಬ್ಬರ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ನಿನ್ನೆ ರಾತ್ರಿಯೂ ಇದೇ ವಿಷಯಕ್ಕೆ ಸಂಬಂಧಿಸಿ ಲತಾ ಮತ್ತು ರಂಜಿತ್ ನಡುವೆ ತೀವ್ರ ಜಗಳವಾಗಿತ್ತು. ಇದರಿಂದ ಮನನೊಂದ ಲತಾ, ಇಂದು ಬೆಳಿಗ್ಗೆ ತನ್ನ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾಳೆ.ಸುಬ್ರಮಣ್ಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *