Breaking News

ಜೀವಾವಧಿ ಶಿಕ್ಷೆ ಕೈದಿ ಆಸ್ಪತ್ರೆಯಿಂದ ಪರಾರಿ, ಕ್ಯಾನ್ಸರ್ ಚಿಕಿತ್ಸೆಗಾಗಿ ಕಿದ್ವಾಯಿಯಲ್ಲಿದ್ದ ವಿಜಯಪುರದ ಯುವಕ!

ಬೆಂಗಳೂರು ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದ್ದು, ಆರೋಪಿಯ ಪರಾರಿ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ.ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 262ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಪತ್ತೆಹಚ್ಚಲು ಬಲೆ ಬೀಸಿದ್ದಾರೆ. ಪ್ರಸ್ತುತ ಸಿದ್ದಾಪುರ ಪೊಲೀಸರು ಘಟನಾ ಸ್ಥಳದಿಂದ ಸಾಕ್ಷ್ಯ ಸಂಗ್ರಹಿಸಿ, ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಯ ಹಾದಿ ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ಆರಂಭವಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *