Breaking News

ಅಕ್ರಮ ಸಂಬಂಧದ ಅನುಮಾನಕ್ಕೆ ಪ್ರೀತಿಯನ್ನೇ ಕೊಂದ!

ಯಲಹಂಕ ಉಪನಗರದಲ್ಲಿ ನಡೆದ ಪತ್ನಿಯನ್ನು ಕೊಂದ ಪ್ರಕರಣದಲ್ಲಿ ಆರೋಪಿ ಪತಿ ಸೈದುಲ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ಅಮೀನಾ ಜೊತೆ ಜಗಳವಾಡಿ ಅಕ್ರಮ ಸಂಬಂಧದ ಬಗ್ಗೆ ಅನುಮಾನಗೊಂಡಿದ್ದು ವೈವಾಹಿಕ ಕಲಹವೇ ಈ ಘಟನೆಯ ಕಾರಣವಾಗಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.ಆರೋಪಿ ಸೈದುಲ್ ಸ್ಥಳದಿಂದ ಪರಾರಿಯಾಗಿ ರಾಜಮಂಡ್ರಿಗೆ ಓಡಿಹೋದ. ಇದಾದ ನಂತರ ಯಲಹಂಕ ನ್ಯೂಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದರು. ಕೊನೆಗೆ ಆತನನ್ನು ಪತ್ತೆಹಚ್ಚಿ ಬಂಧಿಸಲು ಪೊಲೀಸರು ಯಶಸ್ವಿಯಾದರು. ಪ್ರಸ್ತುತ ಯಲಹಂಕ ನ್ಯೂಟೌನ್ ಪೊಲೀಸರು ಪ್ರಕರಣವನ್ನು ಮುಂದುವರೆಸಿ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *