ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದಲ್ಲಿ ಪ್ರೀತಿ ವಿಚಾರಕ್ಕೆ ಶಾಲಾ ಬಾಲಕಿಯೊಬ್ಬಳಿಗೆ ಜೀವ ಬೆದರಿಕೆಯೊಡ್ಡಿ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.ಕೃತ್ಯದ ಬಗ್ಗೆ ಬಾಲಕಿಯ ತಾಯಿ ದೂರು ನೀಡಿದ್ದಾರೆ. ಅದರನ್ವಯ ಆರೋಪಿ ಇಮಾಮಹುಸೇನ್ ಮಹಬೂಬಅಲಿ ಮಹಲ್ದಾರ (22) ಎಂಬಾತನನ್ನು ಬಂಧಿಸಲಾಗಿದೆ’ ಎಂದು ತಡಸ ಪೊಲೀಸರು ಹೇಳಿದ.ಬಾಲಕಿಯನ್ನು ಹಿಂದಿನಿಂದ ಹಿಡಿದು ಎಳೆದಾಡಿ ಕೆನ್ನೆ ಹಾಗೂ ಗದ್ದದ ಭಾಗದಲ್ಲಿ ಪರಚಿದ್ದ. ನಂತರ, ಸ್ಥಳದಿಂದ ಪರಾರಿಯಾಗಿದ್ದ. ರಕ್ತ ಸೋರುತ್ತಿದ್ದರಿಂದ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

