ಕನ್ನಡದ ಖ್ಯಾತ ನಿರ್ದೇಶಕ ಎಸ್ ನಾರಾಯಣ ಮತ್ತು ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಅಡಿ ಇದೀಗ ಕೇಸ್ ದಾಖಲಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಮಾವ ನಾರಾಯಣ, ಅತ್ತೆ ಭಾಗ್ಯವತಿ, ಪತಿ ಪವನ್ ವಿರುದ್ಧ ಸೊಸೆ ಪವಿತ್ರ ಬೆಂಗಳೂರಿನ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ.ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ನಾನೇ ಮನೆಯನ್ನು ನಡೆಸುತ್ತಿದ್ದೆ. ಕೆಲಸ ಮಾಡಿ ಪವನ ಪತ್ನಿ ಪವಿತ್ರ ಮನೆ ನಡೆಸುತ್ತಿದ್ದರು. ಈ ವೇಳೆ ತಾಯೆ ಒಡೆಯವೇಯನ್ನು ಅಡವಿಟ್ಟು ಪವಿತ್ರ ಹಣ ಕೊಟ್ಟಿದ್ದಾರೆ. ಆದರೆ ಕಲಾ ಸಾಮ್ರಾಟ ಟೀಂ ಅಕಾಡೆಮಿ ಲಾಸ್ ಆಗಿ ಕ್ಲೋಸ್ ಆಗಿತ್ತು. ಬಳಿಕ 10 ಲಕ್ಷ ರೂಪಾಯಿ ಸಾಲ ಮಾಡಿ ಪತ್ನಿ ಪವಿತ್ರ ಪತಿಗೆ ನೀಡಿದ್ದಾರೆ ಆದರೆ ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಪವಿತ್ರ ದೂರು ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

