ವಿಶ್ವ ಹಿಂದೂ ಪರಿಷತ್, ಬಜರಂಗದಳ ಸ್ಥಾಪಿಸಿದ್ದ ಮಹಾ ಗಣಪತಿ ವಿಸರ್ಜನೆ ಅಂಗವಾಗಿ ಶನಿವಾರ ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಶೋಭಾಯಾತ್ರೆಗೆ 4 ಲಕ್ಷಕ್ಕೂ ಅಧಿಕ ಭಕ್ತರು ಸಾಕ್ಷಿಯಾದರು.ಜೈನಧಾಮದಿಂದ ಆರಂಭವಾದ ಶೋಭಾಯಾತ್ರೆ ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಮಹಾವೀರ ಸರ್ಕಲ್, ಬಿ.ಡಿ.ವೃತ್ತ, ಸಂಗೊಳ್ಳಿ ರಾಯಣ್ಣ, ಕನಕ ಸರ್ಕಲ್ ಮೂಲಕ ಭಾನುವಾರ ನಸುಕಿನ ವೇಳೆಗೆ ಚಂದ್ರವಳ್ಳಿ ತಲುಪಿತು. ಚಂದ್ರವಳ್ಳಿ ಕೆರೆಯಲ್ಲಿ ಮೂರುತಿಯನ್ನು ವಿಸರ್ಜನೆ ಮಾಡಲಾಯಿತು. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಪೊಲೀಸ್ ಸರ್ಪಗಾವಲು ಇತ್ತು. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. 3,000ಕ್ಕೂ ಹೆಚ್ಚು ಸಿಬ್ಬಂದಿ ಭದ್ರತೆ ಕೈಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

