ಮಂಡ್ಯದ ಅಬಕಾರಿ ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಸೂಚಿಸುವಂತೆ ಕೋರಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರಿಗೆ, ಲೋಕಾಯುಕ್ತಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ದೂರು ಕೊಟ್ಟಿದೆ.ಸಿಎಲ್7 ಲೈಸೆನ್ಸ್ ನೀಡಲು 60 ಲಕ್ಷ ರೂ.ಬೇಡಿಕೆ ಇಟ್ಟಿರುವ ಮಂಡ್ಯ ಅಬಕಾರಿ ಉಪ ಆಯುಕ್ತ ವಿರುದ್ಧ ಈಗಾಗಲೇ ಕೆಲವರು ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ ಎಂದು ರಾಜ್ಯಪಾಲರಿಗೆ ಕೊಟ್ಟಿರುವ ದೂರಿನಲ್ಲಿ ಸಂಘದ ಅಧ್ಯಕ್ಷ ಇ.ಎನ್.ಕೃಷ್ಣೇಗೌಡ ಉಲ್ಲೇಖಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

