Breaking News

ಬೆಂಗಳೂರಲ್ಲಿ ರ‍್ಯಾಪಿಡೋ ಆಟೋ ಚಾಲಕನಿಂದ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ : ಪ್ರಕರಣ ದಾಖಲು.

ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ನಗರದ ಕಾಲೇಜು ವಿದ್ಯಾರ್ಥಿನಿಗೆ ಆಟೋ ಚಾಲಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಸೆಪ್ಟಂಬರ್ 8ರಂದು ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 19 ವರ್ಷದ ವಿದ್ಯಾರ್ಥಿನಿ ನೀಡಿರುವ ದೂರಿನ ಅನ್ವಯ ಆಟೋ ಚಾಲಕ ಹನುಮಂತಪ್ಪ ತಳವಾರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ನಂಬರ್ ಆಧರಿಸಿ ಆರೋಪಿಯ ಪತ್ತೆ ಕಾರ್ಯ ಮುಂದುವರೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *