Breaking News

ಫ್ಲೈಒವರ್‌ನಿಂದ ಪಲ್ಟಿಯಾಗಿ ರೈಲ್ವೆ ಹಳಿಗೆ ಬಿದ್ದ ಕಾರು: ರೈಲುಗಳ ಸಂಚಾರದಲ್ಲಿ ವ್ಯತ್ಯಯ.

ವೇಗವಾಗಿ ಸಾಗುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಫ್ಲೈಒವರ್ ಮೇಲಿನಿಂದ ಕೆಳಗೆ ಉರುಳಿ ರೈಲ್ವೆ ಹಳಿಯ ಮೇಲೆ ಬಿದ್ದ ಪರಿಣಾಮ ಕೆಲ ಗಂಟೆಗಳ ಕಾಲ ರೈಲ್ವೆ ಸಂಚಾರದಲ್ಲಿ ವ್ಯತ್ಯ ಆದಂತಹ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.ದೆಹಲಿಯ ಹೈದರ್‌ಪುರ ಮೆಟ್ರೋ ನಿಲ್ದಾಣದ ಸಮೀಪ ಇರುವ ಮುಕರ್ಬಾ ಚೌಕ್‌ ಫ್ಲೈಒವರ್‌ ಮೇಲೆ ವೇಗವಾಗಿ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಕೆಳಗಿದ್ದ ರೈಲ್ವೆ ಹಳಿಯ ಮೇಲೆ ಬಿದ್ದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *