ಬಾಲಕಿಗೆ ಆಟ ಆಡಿಸುವ ನೆಪದಲ್ಲಿ ಟೆರಸ್‌ಗೆ ಕರೆದೊಯ್ದು ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ.7 ವರ್ಷದ ಸಾನ್ವಿ ಮೃತ ಬಾಲಕಿ ಹಾಗೂ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆ.27ರಂದು ಮಲತಾಯಿ ರಾಧಾ ಬಾಲಕಿಗೆ ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದೊಯ್ದಿದ್ದಳು.ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ರಾಧಾಳನ್ನು ಬಂಧಿಸಿದ್ದಾರೆ. ವಿಚಾರಣೆಗೊಳಪಡಿಸಿದಾಗ ಆಸ್ತಿ ಇಬ್ಭಾಗ ಆಗುತ್ತದೆ ಎಂದು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

