ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಜಕೀಯ ಪ್ರವೇಶಕ್ಕೆ ವೇದಿಕೆಯಲ್ಲೇ ಮನವಿ ಮಾಡಲಾಗಿದೆ. ವರುಣಾ ಕ್ಷೇತ್ರದ ಭುಗತಹಳ್ಳಿ ಗ್ರಾಮದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.ಗ್ರಾಮದ ಮುಖಂಡ ಕೆ. ಮಣಿಯಯ್ಯ, ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಕೊಡುಗೆಗಳನ್ನು ಸ್ಮರಿಸಿದರು. ಗ್ರಾಮದ ಜನರು ಸಂಕಷ್ಟದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರನ್ನು ಕೈಬಿಟ್ಟಿಲ್ಲ ಎಂದು ಹೇಳಿದ ಅವರು, ಈಗ ಅವರ ಮೊಮ್ಮಗ ಧವನ್ ಸಿದ್ದರಾಮಯ್ಯ ರಾಜಕೀಯಕ್ಕೆ ಪ್ರವೇಶಿಸಿ ಶಾಸಕರಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇದಕ್ಕೆ ನೆರೆದಿದ್ದ ಗ್ರಾಮಸ್ಥರು ಕೂಡ ಜೈಕಾರ ಹಾಕಿ ಬೆಂಬಲ ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

