ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

