Breaking News

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ಹೊರ ಹಾಕುತ್ತಿವೆ. ಇದೇ ವೇಳೆ ವಿಜಯಪುರ ನಗರ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಾಮುಂಡಿ ತಾಯಿಗೆ ಹೂ ಮುಡಿಸಲು ಸನಾತನ ಧರ್ಮದವರಿಗೆ ಮಾತ್ರ ಅವಕಾಶ ಇದೆ.ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಇವರ ಹೇಳಿಕೆ ವಿರುದ್ಧ ಕೊಪ್ಪಳದಲ್ಲಿ ಎಫ್‌ಐಆರ್ ದಾಖಲಾಗಿದೆ.ಶಾಸಕ ಯತ್ನಾಳ್ ದಲಿತ ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿದ್ದಾರೆ ಎಂದು ದಲಿತ ವಿಮೋಚನೆಯ ಮಾನವ ಹಕ್ಕುಗಳ ಕಾರ್ಯಕರ್ತ ಮಲ್ಲು ಪೂಜಾರ್ ಆರೋಪಿಸಿ ದೂರು ನೀಡಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *