ದೆಹಲಿಯನ್ನು ಬೀದಿನಾಯಿ ಮುಕ್ತ ಮಾಡಿ ಎಂಬ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೇಶಾದ್ಯಂತ ಸಂಚಲನ ಸೃಷ್ಟಿಸಿ ಚರ್ಚೆ ಹುಟ್ಟು ಹಾಕಿದ್ದ ನಿರಾಶ್ರಿತ ಶ್ವಾನಗಳಿಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ.ಉತ್ತರ ಪ್ರದೇಶ ಸರ್ಕಾರದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಅಮೃತ್ ಅಭಿಜಿತ್ ಅವರು ಈ ಆದೇಶ ಹೊರಡಿಸಿದ್ದಾರೆ. ಯಾರಿಗಾದರೂ ನಾಯಿ ಕಚ್ಚಿದ್ದು ತಿಳಿದುಬಂದರೆ, ಆ ಶ್ವಾನವನ್ನು ಹಿಡಿದು ಸಂತಾನಹರಣ ಚಿಕಿತ್ಸೆ ಮಾಡಲಾಗುವುದು. ಬಳಿಕ 10 ದಿನ ಅದರ ನಡವಳಿಕೆಯ ಮೇಲೆ ನಿಗಾ ವಹಿಸಲಾಗುವುದು. ಬಿಡುಗಡೆ ಮಾಡುವಾಗ, ಮೈಕ್ರೋಚಿಪ್ ಅಳವಡಿಸಲಾಗುವುದು. ಇನ್ನೊಮ್ಮೆ ಅದು ಯಾರಿಗಾದರೂ ಕಚ್ಚಿದ್ದು ಕಂಡುಬಂದರೆ ಶಾಶ್ವತ ಸೆರೆವಾಸ ಖಚಿತ ಎಂದು ಆದೇಶದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

