ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ದಂಪತಿ ಕೆ.ಎಂ.ತಿಪ್ಪೇಸ್ವಾಮಿ ಮತ್ತು ಪಾರ್ವತಮ್ಮ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಕೃತಜ್ಞತೆ ಮತ್ತು ಪ್ರೀತಿಯನ್ನು ತಮ್ಮ ಮನೆಯ ಮುಖ್ಯ ಬಾಗಿಲಿನ ಮೇಲೆ ಅವರ ಹೆಸರು ಹಾಗೂ ಭಾವಚಿತ್ರ ಕೆತ್ತಿಸುವ ಮೂಲಕ ವ್ಯಕ್ತಪಡಿಸಿದ್ದಾರೆ.ಪಾರ್ವತಮ್ಮ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾಗಿದ್ದು, ಯೋಜನೆ ಆರಂಭದಿಂದಲೇ 15 ತಿಂಗಳುಗಳ ಕಾಲ ಬ್ಯಾಂಕ್ ಖಾತೆಗೆ ಬಂದ ಹಣವನ್ನು ಖರ್ಚು ಮಾಡದೇ ಕೂಡಿಟ್ಟಿದ್ದರು. ಹಳೆಯ ಮನೆಯ ಬಾಗಿಲು ಸರಿಯಾಗಿರಲಿಲ್ಲ. ಹೀಗಾಗಿ ಇದುವರೆಗೆ ಬಂದ ಗೃಹಲಕ್ಷ್ಮಿ ಹಣದಲ್ಲಿ ಹೊಸ ಬಾಗಿಲು ಮಾಡಿಸುವ ನಿರ್ಧಾರ ಕೈಗೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

