ಹಿರಿಯರ ಕಾಲದ ದೇವರ ತೆಂಗಿನಕಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಮಶೆಟ್-ಕೊಳಮಾಲ ಗ್ರಾಮದ ನಿವಾಸಿ ಆಗಿರುವ ದೊಂಡು ವರಕ ಮತ್ತು ಅವನ ತಮ್ಮನ ನಡುವೆ ಹಿರಿಯರ ಕಾಲದ ದೇವರ ತೆಂಗಿನಕಾಯಿ ಸಲುವಾಗಿ ಜಗಳವಾಗಿತ್ತು.ತಮ್ಮನ ಹೆಂಡತಿ ಭಾಗ್ಯಶ್ರಿಯನ್ನು ಕಬ್ಬಿಣದ ಪಿಕಾಸಿಯಿಂದ ಹೊಡೆದು ಕೊಂದು ಪರಾರಿಯಾಗಿದ್ದು, ಮೂರು ದಿನಗಳ ನಂತರ ಆರೋಪಿ ದೊಂಡು ವರಕ ಪತ್ನಿ ಮನೆಗೆ ಹೋಗಿ ಊಟ ಮಾಡುತ್ತಿದ್ದ ವೇಳೆ ಪೊಲೀಸರು ಬಂದು ಲಾಕ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

