ಕಮಿಷನರ್ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಆರ್.ಎನ್.ಬಿಂದುರಾಣಿ, ಕೆ.ಎಸ್.ಸುಂದರ್ ರಾಜ್ ಹಾಗೂ ಎಸಿಪಿಗಳು ಸಭೆಯಲ್ಲಿ ಭಾಗವಹಿಸಿದರು.ದಸರಾ ಅಂಗವಾಗಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ದಕ್ಷಿಣ ವಲಯ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರತ್ಯೇಕ ಸಭೆ ನಡೆಸಿದರು.ದಸರೆಯಲ್ಲಿ ಅನೇಕ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿಗಳ ತವರು ಜಿಲ್ಲೆಯ ಕಾರ್ಯಕ್ರಮವಾಗಿರುವುದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಒದಗಿಸಬೇಕು’ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮನವಿ ಮಾಡಿದರು.ಪ್ರಸ್ತುತ ನಗರ ಪೊಲೀಸ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ, ಡಿಎಆರ್, ಸಿಎಆರ್, ಸಂಚಾರ, ಕೆಎಸ್‌ಆರ್‌ಪಿ, ಮೌಂಟೆಡ್ ಪೊಲೀಸ್, ಚಾಮುಂಡಿ, ಕಮಾಂಡೋ ಪಡೆ ಸಿಬ್ಬಂದಿ ಹಾಗೂ ಸಂಖ್ಯೆಯ ಕುರಿತು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

