ಸ್ನೇಹಿತನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜು ಕ್ಲರ್ಕ್ ಮಹಾಂತೇಶ್ ಬುಕನಟ್ಟಿ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾನೆ.ಮಹಾಂತೇಶ್ ಬುಕನಟ್ಟಿ (24) ಎಂಬ ಯುವಕ ಹತ್ಯೆಯಾದ ದುರ್ದೈವಿ.ಲಾಂಗ್ ಮತ್ತು ಮಚ್ಚುಗಳಿಂದ ಕತ್ತು, ಹೊಟ್ಟೆ, ಬೆನ್ನು ಸೇರಿದಂತೆ ಎಲ್ಲೆಂದರಲ್ಲಿ ಮನಬಂದಂತೆ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನೆ ನಡೆದ ತಕ್ಷಣ ಸ್ಥಳಕ್ಕಾಗಮಿಸಿದ ಯಮಕನಮರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾಂತೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

