ವಿದ್ಯಾರ್ಥಿನಿಯೊಬ್ಬಳು ಪ್ರೇಮ ವೈಫಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತೂಗುಸೇತುವೆ ಬಳಿ ಗುರುವಾರ ನಡೆದಿದೆ.ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ನಂಜುಂಡಸ್ವಾಮಿ ಮತ್ತು ಅಂಬುಜ ದಂಪತಿ ಪುತ್ರಿ ದೀಪಿಕಾ.ಎಚ್.ಎನ್ (19) ವರ್ಷ ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಾಕೆ.ದೀಪಿಕಾ ತನ್ನ ಸಾವಿಗೆ ನಾನೇ ಕಾರಣ, ತನ್ನ ತಂದೆ-ತಾಯಿಯ ಮನಸ್ಸು ನೋಯಿಸಿರುವ ಕಾರಣ ನೀಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ತಂದೆ ನಂಜುಂಡಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

