Breaking News

ಬೋನಿನಲ್ಲಿ ಕರು ಕಟ್ಟಿದ ಅರಣ್ಯ ಇಲಾಖೆ: ಬೋನಿಗೆ ಬಿದ್ದರೂ ಕರುವನ್ನು ತಿನ್ನದೇ ಬಿಟ್ಟ ಚಿರತೆ.

ಹೆಚ್‌ಡಿ ಕೋಟೆಯಲ್ಲಿ ಚಿರತೆ ಹಾವಳಿಯಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಚಿರತೆಯನ್ನು ಹಿಡಿಯಲು ಅಲ್ಲಿ ಬೋನ್ ಇಟ್ಟಿದ್ದು, ಬೋನಿಗೆ ಪುಟ್ಟ ಕರುವೊಂದನ್ನು ಕಟ್ಟಿದ್ದರು. ಆದರೆ ಬೋನಿಗೆ ಬಿದ್ದ ಚಿರತೆ ಕರುವನ್ನು ತಿನ್ನದೇ ಹಾಗೆಯೇ ಸುಮ್ಮನೆ ಕುಳಿತು ಗುರಾಯಿಸುತ್ತಾ ಗುರುಗುರುಡುತ್ತಿದ್ದ ದೃಶ್ಯ ಈಗ ವೈರಲ್ ಆಗಿದೆ. ವೀಡಿಯೋ ನೋಡಿದ ಅನೇಕರು ಬೋನಿನಲ್ಲಿ ಕರುವನ್ನು ಕಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಡಿನಿಂದ ನಾಡಿಗೆ ಬಂದು ಜನರಲ್ಲಿ ಭೀತಿ ಹುಟ್ಟಿಸಿರುವ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಅರಣ್ಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯ ನಂತರ ಈ ಕೃತ್ಯವೆಸಗಿದ ಗ್ರಾಮಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *