Breaking News

ಹಳೇ ದ್ವೇಷದ ಕಾರಣ ಮಚ್ಚಿನಿಂದ ಹಲ್ಲೆ: ಐವರ ಬಂಧನ!

ಮಹಮ್ಮದ್ ಜಾವೀದ್ ಹಾಗೂ ಆರೋಪಿಗಳು ಅಕ್ಕಪಕ್ಕದ ಮನೆಯ ನಿವಾಸಿಗಳಾಗಿದ್ದು, ಮಹಮ್ಮದ್ ಜಾವೀದ್ ಹಾಗೂ ಅಫ್ಜಲ್‌ ಖಾನ್ ನಡುವೆ ಈ ಹಿಂದೆಯೂ ಸಣ್ಣ ಪುಟ್ಟ ವಿಚಾರಕ್ಕೆ ಗಲಾಟೆಯಾಗಿತ್ತು. ಶನಿವಾರ ರಾತ್ರಿ ಇಬ್ಬರ ನಡುವೆ ಮತ್ತೆ ಗಲಾಟೆಯಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಉಳಿದ ಆರೋಪಿಗಳು ಜಾವೀದ್ ಮೇಲೆ ಹಲ್ಲೆ ಮಾಡಿದ್ದಾರೆ.ಮಲ್ಲೇಶ್ವರದ ನಿವಾಸಿಗಳಾದ ಅಫ್ಜಲ್ ಖಾನ್, ಸೈಯದ್ ವಸೀಂ, ಜಯಿದ್ ಭಾಷಾ, ಸೈಯದ್ ಹಫೀಜ್ ಮತ್ತು ಸಲೀಂ ಪಾಷಾ ಬಂಧಿತರು.ಈ ಹಿಂದೆಯೂ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿ, ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು’ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *