Breaking News

ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ: ರೂಮ್​​ನಲ್ಲಿ ಸಿಕ್ಕ ಡೆತ್​ ನೊಟ್!!

ನರ್ಸಿಂಗ್ ವಿದ್ಯಾರ್ಥಿನಿ  ನೇಣುಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬೆಳಗಾವಿಯ ಸದಾಶಿವನಗರದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಸುಮಿತ್ರಾ ತಂದೆ, ಸಂಬಂಧಿಕರ ಸಮ್ಮುಖದಲ್ಲಿ ಹಾಸ್ಟೆಲ್ ರೂಮ್ ಡೋರ್ ಓಪನ್ ಮಾಡಲಾಗಿದ್ದು, ಮಗಳ ನೇಣು ಬಿಗುದುಕೊಂಡಿರುವುದನ್ನು ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 25 ಸಾವಿರ ರೂ. ಸಾಲಮಾಡಿ ಮಗಳನ್ನು ಕಾಲೇಜಿಗೆ ಸೇರಿಸಿದ್ದೆ. ನನ್ನ ಮಗಳಿಗೆ ಏನಾಗಿದೆ ಹೇಳಿ ಎಂದು ತಂದೆ ದುಂಡಪ್ಪ ಅವರು ವಾರ್ಡನ್ ಕಾಲಿಗೆಬಿದ್ದು ಗೋಳಾಡಿದರು. ಇನ್ನು ಸುಮಿತ್ರಾ ಆತ್ಮಹತ್ಯೆಗೆ ಶರಣಾದ ಕೊಠಡಿಯಲ್ಲಿ ಪೊಲೀಸರು ತಪಾಸಣೆ ಮಾಡಿದರು.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *