Breaking News

ಚಾಮುಂಡಿ ಬೆಟ್ಟದ ಅರ್ಚಕ ನಿಧನ – ಇಂದು ಮಧ್ಯಾಹ್ನದವರೆಗೆ ದೇವಿ ದರ್ಶನಕ್ಕೆ ನಿರ್ಬಂಧ.!

ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ, ಇದರ ನಡುವೆಯೇ ದೇವಸ್ಥಾನಕ್ಕೆ ಸೂತಕದ ಛಾಯೆ ಆವರಿಸಿದ್ದು, ಚಾಮುಂಡಿ ಬೆಟ್ಟದ ಶಿವಾರ್ಚಕರು ನಿಧನರಾಗಿದ್ದಾರೆ. ಈ ಹಿನ್ನೆಲೆ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ನಿರ್ಬಂಧಿಸಲಾಗಿದೆ.ಮೃತರನ್ನು ಶಿವಾರ್ಚಕ ವಿ. ರಾಜು ಎಂದು ಗುರುತಿಸಲಾಗಿದೆ. ಕಳೆದ ಕೆಲ ವರ್ಷಗಳಿಂದ ದೇವಸ್ಥಾನದಲ್ಲಿ ಶಿವಾರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ನಿನ್ನೆ ಸಂಜೆ ಮೃತಪಟ್ಟಿದ್ದಾರೆ. ಈ ಹಿನ್ನಲೆ ಇಂದು ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ದೇವಿ ದರ್ಶನ ಬಂದ್ ಮಾಡಲಾಗಿದೆ.ಮಧ್ಯಾಹ್ನ ರಾಜು ಅವರ ಸಂಸ್ಕಾರ ಮುಗಿದ ಬಳಿಕ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *