Breaking News

ಸಂಪುಟ ಪುನಾರಚನೆ: ಸಲೀಮ್ ಮಹಮದ್ ಹೇಳಿಕೆ….

ಮಗುವಿನ ಮನಸ್ಸಿನ, ಸಬ್ಯ ನಾಯಕ ಸಲೀಂ ಅಹ್ಮದ್ ಗೆ ಸಚಿವ ಸ್ಥಾನ ಪಕ್ಕಾ!!!

ಉ-ಕ ಅಲ್ಪಸಂಖ್ಯಾತ ನಾಯಕರ ಕೋಟಾದಡಿ ಸಚಿವ ಸ್ಥಾನಕ್ಕೆ ಹೆಚ್ಚಿದ ಒತ್ತಡ..

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ನವೆಂಬರ್ ತಿಂಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು.ಸಚಿವ ಸ್ಥಾನದಿಂದ ಹೊರ ಬಂದವರಿಗೆ

ಪಕ್ಷ ಸಂಘಟನೆಯ ಕೆಲಸ ವಹಿಸಲಾಗುತ್ತದೆ. ಇನ್ನು ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿದ್ದು, ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತ ರಿಗೆ ಸಚಿವ ಸ್ಥಾನ ನೀಡಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.ಇದೇ ವೇಳೆ ಮತಾಂತರದ ಬಗ್ಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಲೀಂ ಅಹ್ಮದ್ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ, ಅದು ಪಕ್ಷ ಅಥವಾ ಸರ್ಕಾರದ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *