Breaking News

ಪ್ರೀತಿ-ಪ್ರೇಮ: ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು!

ಅಪ್ರಾಪ್ತ ಪ್ರೇಮಿಗಳ ಪ್ರೀತಿ-ಪ್ರೇಮ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ಕುಟುಂಬದ ಭಯದಿಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ.ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮನೆಯವರು ತಮ್ಮ ಪ್ರೀತಿಯನ್ನು ವಿರೋಧಿಸಬಹುದು ಎಂದು ಊಹಿಸಿ ಬ್ಯಾಟರಾಯನಹಳ್ಳಿ ತಾಲೂಕಿನ ಹೊರವಲಯದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಂಡು ರೈಲಿಗೆ ತಲೆಕೊಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಬೆಂಗಳೂರಿನ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *