ಸಂಚಾರ ಠಾಣೆಯ ಮಹಿಳಾ ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.ಹೆಲ್ಮೆಟ್ ಧರಿಸದೆ, ಮೊಬೈಲ್‌ನಲ್ಲಿ ಮಾತಾಡಿಕೊಂಡು ಬಂದ ಸೆಲ್ವಕುಮಾರ್‌ನನ್ನು ತಡೆದಿದ್ದಾರೆ. ಬಳಿಕ ವಾಹನದ ದಾಖಲೆಗಳನ್ನು ಕೇಳಿದಾಗ ಸೂಕ್ತ ದಾಖಲೆಗಳು ಇಲ್ಲ ಎಂದು ಸೆಲ್ವಕುಮಾರ್ ಹೇಳಿದ್ದಾರೆ. ಆದ್ದರಿಂದ ಹೆಲ್ಮೆಟ್ ರಹಿತ ಚಾಲನೆ ಮತ್ತು ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಸಂಬಂಧ ಸ್ಥಳದಲ್ಲೇ ದಂಡ ಕಟ್ಟುವಂತೆ ಸೂಚಿಸಿದ್ದಾರೆ.ಸೆಲ್ವಕುಮಾರ್‌ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

