ಸರ್ಕಾರದ ತಪ್ಪು ನಿರ್ಣಯಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳು ದೀರ್ಘಕಾಲದಿಂದ ತೀವ್ರ ತೊಂದರೆಗಳನ್ನು ಅನುಭವಿಸುತ್ತಿವೆ. ಕಳೆದ ಹಲವು ವರ್ಷಗಳಿಂದ ಅನೇಕ ಇಲಾಖೆಗಳ ನೇಮಕಾತಿ ನಡೆಯದ ಕಾರಣ ವಿದ್ಯಾರ್ಥಿಗಳು ವಯೋಮಿತಿಯನ್ನು ಮೀರಿದ್ದಾರೆ. ಇನ್ನು ಹಲವು ವರ್ಷಗಳಿಂದ ಶಿಕ್ಷಕರ ನೇಮಕಾತಿ ನಡೆದಿಲ್ಲ.4–5 ವರ್ಷಗಳಿಂದ PC, PSI ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೂಡ ಸ್ಥಗಿತವಾಗಿದೆ.7–8 ವರ್ಷಗಳಿಂದ FDA, SDA ಹುದ್ದೆಗಳ ನೇಮಕಾತಿ ನಡೆದಿಲ್ಲ.ಈ ಹಿನ್ನೆಲೆಯಲ್ಲಿ ಕನಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಅಲ್ಲದೆ, KAS ಅಧಿಸೂಚನೆಯಲ್ಲಿ ಕಂಡುಬಂದಿರುವ ಕನ್ನಡ ಅನುವಾದದ ತಪ್ಪುಗಳನ್ನು ಪರಿಶೀಲಿಸಿ, ಅಧಿಸೂಚನೆಯನ್ನು ರದ್ದುಪಡಿಸುವ ಅಗತ್ಯವಿದೆ.
ಈ ಬೇಡಿಕೆಗಳನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಮನಿಸಿ, ವಿದ್ಯಾರ್ಥಿಗಳ ಭವಿಷ್ಯವನ್ನು ಉಳಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಮನವಿ ಮಾಡಿಕೊಂಡಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಕಾಂತಕುಮಾರ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆ ನಡೆಸಲಾಯಿತು.ಹೋರಾಟದಿಂದ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

