ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಹಾಗೂ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಭೀಮಪ್ಪ ಕಟ್ಟಿಗೆಯಿಂದ ಸಮರ್ಥನ ಬಲಗಣ್ಣಿಗೆ ಇರಿದಿದ್ದಾನೆ. ಇದರಿಂದ ತೀವ್ರಗೊಂಡಿರುವ ಸಮರ್ಥನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ.ಘಟನೆ ಬಗ್ಗೆ ಮುಖ್ಯ ಶಿಕ್ಷಕಿ ಜಯಶ್ರೀ ನಡುವಿನಕೇರಿ, ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿಗೆ ಗಮನಕ್ಕೆ ತಂದಿದ್ದಾರೆ. ಆದ್ರೆ, ಘಟನೆಯನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಶಿಕ್ಷರ ವಿರುದ್ಧ ಸೂಕ್ತ ಕ್ರಮಕ್ಕಾಗಿ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರಗೆ ಮನವಿ ಮಾಡಲಾಗಿದೆ. ಕಣ್ಣು ಕಳೆದುಕೊಂಡ ವಿದ್ಯಾರ್ಥಿಗೆ ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

