ಹುಬ್ಬಳ್ಳಿ ಮೂಲದ ತೆಲಂಗಾಣದ ಹಿರಿಯ ಐಪಿಎಸ್ ಅಧಿಕಾರಿ ವಿ.ಸಿ. ಸಜ್ಜನರ ಅವರು ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಆಗಿ ನೇಮಕವಾಗಿದ್ದಾರೆ.ವಿ.ಸಿ. ಸಜ್ಜನರ ಅವರು ತೆಲಂಗಾಣ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಪ್ರಿಯಾಂಕಾ ರೆಡ್ಡಿ ಎನ್ನುವ ಪಶುವೈದ್ಯೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆಗೈದು ಆಕೆಯ ದೇಹ ಸುಟ್ಟು ಹಾಕಿದ್ದರು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ನಾಲ್ವರೂ ಆರೋಪಿಗಳನ್ನು ಎನ್‌ಕೌಂಟರ್ ಮಾಡಲಾಗಿತ್ತು. ಆಗ ಸೈಬರಾಬಾದ್ ಪೊಲೀಸ್ ಕಮಿಷನರ್ ಆಗಿ ವಿಶ್ವನಾಥ್ ಸಜ್ಜನರ ಕಾರ್ಯನಿರ್ವಹಿಸುತ್ತಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

