ನೆಲಮಂಗಲ ಟೋಲ್ ಬಳಿ ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಂಟೈನರ್ ಟ್ರಕ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿ ಹೊಡೆದಿದ್ದು, ಇದರಿಂದಾಗಿ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಸರಕನ್ನು ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ಒಂದು ಕಿಮೀ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸದ್ಯ ಕಂಟೈನರ್ ಅನ್ನು ತೆರವು ಗೊಳಿಸಲು ಟೋಲ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

