ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲಿಗೆ ಬಂದಿದೆ. ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ದಂಧೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಆಗತಾನೆ ಋತುಮತಿಯಾದ ಬಾಲಕಿಯನ್ನೇ ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಎನ್ನುವರನ್ನು ಬಂಧಿಸಲಾಗಿದೆ.ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ ಬರೋಬ್ಬರಿ 20 ಲಕ್ಷ ರೂಪಾಯಿ ರೇಟ್ ಫಿಕ್ಸ್ ಮಾಡಿದ್ದರು. ವಾಟ್ಸಾಪ್ ವಿಡಿಯೋ ಮುಲಕ ಬಾಲಕಿಯನ್ನು ಗ್ರಾಹಕರಿಗೆ ತೋರಿಸಿ ಸೆಳೆಯುತ್ತಿದ್ದರು. ಈ ಕೃತ್ಯವನ್ನು ಒಡನಾಡಿ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ. ಈ ಮಾಹಿತಿ ಆಧರಿಸಿ ಮೈಸೂರಿನ ವಿಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

