Breaking News

ಬಾಗಲಕೋಟೆಯಲ್ಲಿ ಕಾರು-ಟಂಟಂ ವಾಹನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಇನೋವಾ ಕಾರು ಹಾಗೂ ಟಂಟಂ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಒಂದು ಘಟನೆ ನಡೆದಿದೆ.ಮಹೇಶ್ ನಾಯ್ಕರ್ (27) ಹಾಗೂ ಮಹಬೂಬ್ ಶೇಖ್ (30) ಮೃತ ದುರ್ದವಿಗಳು, ಇನ್ನು ಅಪಘಾತದಲ್ಲಿ ವಿಶಾಲ ವರತಿಲ್ಲೆ, ವಿಜಯಕುಮಾರ್ ಹಾಗೂ ಗುರುಪ್ರಸಾದ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಮೃತರು ಮತ್ತು ಗಾಯಾಳುಗಳು ನವನಗರದ 45 ನೇ ಸೆಕ್ಟರ್ ನಿವಾಸಿಗಳೇ ಆಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *