Breaking News

ಸೌಲಭ್ಯಗಳ ದುರ್ಬಳಿಕೆ ಕಾರಣ ಉಪತಹಶೀಲ್ದಾರ್ ಗೆ ಅಮಾನತು ಸೂಚನೆ!.

ಗದಗ ಜಿಲ್ಲೆಯಲ್ಲಿ ಅನರ್ಹರಿಗೆ ಪಿಂಚಣಿಗಳನ್ನು ಕೊಡುವಂತಹ ಜಾಲವೊಂದು ಕಳೆದ ಅನೇಕ ವರ್ಷಗಳಿಂದ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಗದಗ ಜಿಲ್ಲಾಧಿಕಾರಿಗಳು ಈಗಾಗಲೇ ವಿಚಾರಣೆ ನಡೆಸಿ ಅನರ್ಹರಿಗೆ ಸಿಗುತ್ತಿದ್ದ ಸೌಲಭ್ಯಗಳನ್ನು ನಿಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಗದಗ ಜಿಲ್ಲೆಯಲ್ಲಿ ಒಟ್ಟೂ 17,997 ಜನ ಅನರ್ಹರಿಗೆ ಬಡವರಿಗೆ, ವೃದ್ಧರಿಗೆ, ವಿಧವೆಯರಿಗೆ ಸಿಗಬೇಕಿದ್ದ ಸೌಲಭ್ಯವನ್ನು ಅಕ್ರಮವಾಗಿ ನೀಡಲಾಗುತ್ತಿತ್ತು. ಈ ಎಲ್ಲಾ ತಪ್ಪುಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್​ ಟಿ.ಟಿ ವಾಲ್ಮೀಕಿ ಅವರನ್ನು ಅಮಾನತುಗೊಳಿಸುವಂತೆ ಸೂಚನೆ ನೀಡಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *