ದೊಡ್ಡಿಗಲ್ಲೂರು ಗ್ರಾಮದ 8 ವರ್ಷದ ಬಾಲಕಿಯೊಬ್ಬಳು ಜ್ವರದಿಂದ ಬಳಲುತ್ತಿದ್ದಾಗ ಪೋಷಕರು ಸಂತೆಹಳ್ಳಿ ಗ್ರಾಮದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕ್ಲಿನಿಕ್ನಲ್ಲಿ ಮಗುವಿಗೆ ನೀಡಿದ ಇಂಜೆಕ್ಷನ್ನಿಂದ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಗೆ ಚಿಕತ್ಸೆ ಮಾಡಿದವರು ನಕಲಿ ವೈದ್ಯರೆಂದು ತಿಳಿದುಬಂದಿದ್ದು, ಅವರು ಕೊಟ್ಟ ಇಂಜೆಕ್ಷನ್ ಪರಿಣಾಮವಾಗಿಯೇ ಬಾಲಕಿ ಸಾವನ್ನಪ್ಪಿದ್ದಾಳೆಂದು ಆರೋಪ ಕೇಳಿಬಂದಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

