ಒತ್ತುವರಿ ಆಗಿರುವ 1,054 ಕೆರೆಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸಲು 10 ವರ್ಷಗಳ ಹಿಂದೆಯೇ ಆದೇಶವಾಗಿದೆ. ಆದರೆ ಸಂಬಂಧಿಸಿದ ಕಡತಗಳು ಇನ್ನೂ ಭೂ ದಾಖಲೆಗಳ ಉಪನಿರ್ದೇಶಕರ (ಡಿಡಿಎಲ್‌ಆರ್) ಕಚೇರಿಯ ಕಪಾಟಿನಲ್ಲಿ ಕೊಳೆಯುತ್ತಿವೆ.ಶಿವಮೊಗ್ಗದ ಭೂ ದಾಖಲೆಗಳ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಗಳ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸ್ವಯಂಪ‍್ರೇರಿತವಾಗಿ (ಸುಮೊಟೊ) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರ ಸೂಚನೆಯ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ಶನಿವಾರ ಡಿಡಿಎಲ್‌ಆರ್ ಕಚೇರಿಯಲ್ಲಿ ತಪಾಸಣೆ ನಡೆಸಲಾಯಿತು.ಜಿಲ್ಲೆಯಲ್ಲಿರುವ 4,792 ಕೆರೆಗಳ ಪೈಕಿ 1,829 ಒತ್ತುವರಿ ಆಗಿರುವುದನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸಲು 2015ರಲ್ಲಿಯೇ ಜಿಲ್ಲಾಡಳಿತದಿಂದ ಆದೇಶವಾಗಿದೆ. ಅದರಲ್ಲಿ 775 ಕೆರೆಗಳನ್ನು ಒತ್ತುವರಿ ಮುಕ್ತಗೊಳಿಸಲಾಗಿದೆ ಎಂದು ದಾಖಲೆಯಲ್ಲಿ ನಮೂದಿಸಲಾಗಿದೆ. ಇನ್ನೂ 1,054 ಕೆರೆಗಳ ತೆರವು ಬಾಕಿ ಉಳಿದಿರುವುದು ದಾಖಲೆ ಪರಿಶೀಲನೆ ವೇಳೆ ಬಹಿರಂಗವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

