ಕೆಮ್ಮು ಮತ್ತು ಶೀತಕ್ಕೆ ಸಂಬಂಧಿಸಿದಂತೆ ಎರಡು ವರ್ಷದೊಳಗಿನ ಮಕ್ಕಳಿಗೆ ಔಷಧ ಶಿಫಾರಸು ಮಾಡಬಾರದು. ಐದು ವರ್ಷದೊಳಗಿನ ಮಕ್ಕಳಿಗೂ ಸಾಮಾನ್ಯವಾಗಿ ಅಗತ್ಯ ಇರುವುದಿಲ್ಲ. ಅತಿ ಅಗತ್ಯವಾದರೆ ಮಾತ್ರ ಸೂಕ್ತ ಪ್ರಮಾಣದಲ್ಲಿ ಕಡಿಮೆ ಅವಧಿಗೆ ಒದಗಿಸಬೇಕು’ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (ಡಿಜಿಎಚ್‌ಎಸ್) ಸೂಚಿಸಿದೆ.ಕೆಮ್ಮಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಮಾಣದಲ್ಲಿ ದ್ರವ ಆಹಾರ ಸೇವನೆ, ವಿಶ್ರಾಂತಿ ಮತ್ತು ಇತರೆ ಚಿಕಿತ್ಸಾ ಕ್ರಮಗಳನ್ನು ಅನುಸರಿಸಬೇಕು. ಈ ಬಗ್ಗೆ ಜಿಲ್ಲಾ ಆರೋಗ್ಯ ಪ್ರಾಧಿಕಾರಗಳು ಸರ್ಕಾರಿ ಆರೋಗ್ಯ ಕೇಂದ್ರಗಳು, ಔಷಧ ಮಳಿಗೆಗಳಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

