Breaking News

ಜೈಪುರ | 6 ವರ್ಷದ ಮಗು ಸಾವು: ಕೆಮ್ಮಿನ ಸಿರಪ್ ನೀಡಲಾಗಿತ್ತು ಎಂದು ಪೋಷಕರ ಮಾಹಿತಿ.

ನಗರದ ಸರ್ಕಾರಿ ಜೆಕೆ ಲೋನ್ ಆಸ್ಪತ್ರೆಯಲ್ಲಿ ತೀವ್ರ ಮೆದುಳು ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮನೆಯಲ್ಲಿ ಮಗುವಿಗೆ ಕೆಮ್ಮಿನ ಸಿರಪ್ ನೀಡಲಾಗಿತ್ತು ಎಂದು ಪೋಷಕರು ಹೇಳಿದ್ದಾರೆ.ಶನಿವಾರ ಬೆಳಿಗ್ಗೆ 4 ಗಂಟೆಗೆ ಬಾಲಕ ಅನಸ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಮೆದುಳು ಜ್ವರದಿಂದ ಬಳಲುತ್ತಿದ್ದ ಮಗು ಆದೇ ದಿನ ಬೆಳಿಗ್ಗೆ 10 ಗಂಟೆ ಕೊನೆಯುಸಿರೆಳೆಯಿತು’ ಎಂದು ಅವರು ತಿಳಿಸಿದ್ದಾರೆ.

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಒಟ್ಟು 11 ಮಕ್ಕಳು ಕಲುಷಿತ ಕೆಮ್ಮಿನ ಸಿರಪ್‌ ಸೇವಿಸಿ ಮೃತಪಟ್ಟಿವೆ ಎಂದು ವರದಿಯಾದ ಬೆನ್ನಲ್ಲೇ ಈ ಪ್ರಕರಣ ಮುನ್ನೆಲೆಗೆ ಬಂದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *