Breaking News

ಉಡುಪಿ : ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು.

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಕಾರನ್ನು ಅವರ ಮನೆಗೆ ತೆಗೆದು ಕೊಂಡು ಹೋಗಲು ಇತ್ತೀಚೆಗೆ ದಾರಿಯ ಸಮಸ್ಯೆ ಇದ್ದುದರಿಂದ ಕಾರನ್ನು ಕಾವ್ರಾಡಿಯ ನೂರಾನಿ ಮಸೀದಿಯ ಎದುರಿನ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು ಎನ್ನಲಾಗಿದೆ. ಅ.4 ರಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ಮೊಹಮ್ಮದ್ ಗೌಸ್ ಅವರ ಸಹೋದರ ಶೇಕ್ ಅನ್ಸಾರ್ ಸಾಹೇಬ್ ನಮಾಜಿಗೆ ಎದ್ದು ಬರುವಾಗ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿರುವುದು ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಶೇಖ್ ಮೊಹಮ್ಮದ್ ಗೌಸ್ ಮನೆಯವರಿಗೆ ಆರ್ಥಿಕವಾಗಿ ನಷ್ಟ ಉಂಟು ಮಾಡುವ ಉದ್ದೇಶದಿಂದ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *