Breaking News

ಕೂಡ್ಲಿಗಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು, 7 ಮಂದಿಗೆ ಗಂಭೀರ ಗಾಯ.

ಅಪಘಾತ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಹಾಗೆಯೇ ಇದೀಗ ಹಂಪಿಯಿಂದ ಬೆಂಗಳೂರಿಗೆ ಹೊರಟಿದ್ದ ಕಾರೊಂದು ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿದೆ. ಈ ಅಪಘಾತದ ರಭಸಕ್ಕೆ ಇಬ್ಬರು ಸಾವು, 7 ಮಂದಿ ಗಾಯಗೊಂಡಿರುವ ಘಟನೆ ಕೂಡ್ಲಿಗಿ ತಾಲ್ಲೂಕಿನ ಬಣವಿಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಮೃತರನ್ನು ಬೆಂಗಳೂರು ಮೂಲದ ಪ್ರೀತಿ (35) ಮತ್ತು ಅವರ ಅವರ ಪುತ್ರ ಯಶ್ಚಿತ್ (1 ವರ್ಷ10 ತಿಂಗಳು) ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *