Breaking News

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್‌ ಸೆರೆ!

ರೌಡಿಶೀಟರ್ ಅಕ್ಟರ್ (21) ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆತ ಚೇತರಿಸಿಕೊಂಡಿದ್ದು, ಶೀಘ್ರದಲ್ಲಿಯೇ ವಿಚಾರಣೆಗೆ ಒಳಪಡಿಸೋ ಸಾಧ್ಯತೆ ಇದೆ.ಶಿವಮೊಗ್ಗ ನಗರ ಹೊರವಲಯದ ಪುರಲೆ ಬಳಿ ಘಟನೆ ನಡೆದಿದೆ. ನ್ಯೂಮಂಡ್ಲಿಯ ನಿವಾಸಿ ಅಕ್ಟರ್ ಮೇಲೆ ಈಗಾಗಲೇ ನಾಲ್ಕಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅಮ್ಮದ್ ಕೊಲೆ ಪ್ರಕರಣದಲ್ಲಿ ಸಹ ಈತ ಆರೋಪಿಯಾಗಿದ್ದಾನೆ.ಅಕ್ಟರ್‌ನನ್ನು ಬಂಧಿಸಲು ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ದೊಡ್ಡಪೇಟೆ ಠಾಣೆ ಪಿಎಸ್‌ಐ ಮಂಜುನಾಥ್ ಅಕ್ಟರ್‌ಗೆ ಶರಣಾಗುವಂತೆ ಸೂಚಿಸಿದ್ದಾರೆ. ಈ ವೇಳೆ ಅಕ್ಟರ್ ಪೊಲೀಸ್ ಸಿಬ್ಬಂದಿ ಚಂದ್ರನಾಯ್ಕ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಇದ್ರಿಂದ ಆತ್ಮರಕ್ಷಣೆಗಾಗಿ ಅಕ್ಟರ್‌ ಮೇಲೆ ಗುಂಡು ಹಾರಿಸಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *