ಪತ್ನಿಯ ಶೀಲ ಶಂಕಿಸಿ ಪತ್ನಿಯನ್ನೇ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ. 37 ವರ್ಷದ ಯಲ್ಲಮ್ಮ ಅಲಿಯಾಸ್ ಸ್ವಾತಿ ಕೊಲೆಯಾದ ಮಹಿಳೆ. ಪತಿ ರಮೇಶ್ ನರಗುಂದ ಎನ್ನುವಾತನಿಂದ ಕೃತ್ಯ ನಡೆದಿದೆ. ಒಳಕಲ್ಲು ನಿಂದ ತಲೆ ಮೇಲೆ ಎತ್ತಿಹಾಕಿ, ಚಾಕುವಿಂದ ಇರಿದು ಕೊಲೆಮಾಡಿದ್ದಾನೆ.ಚಾಕು ಹಿಡಿದು ಮನೆ ಮುಂದೆ ಆರ್ಭಟ ಮಾಡುತ್ತಿದ್ದ. ಅವನ ವರ್ತನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದರು. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು, ಎಸ್ಪಿ ರೋಹನ್ ಜಗದೀಶ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ವಶಕ್ಕೆ ಪಡೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

