ಧಾರವಾಡದ, ಹೊಸ ಯಲ್ಲಾಪುರ ರಸ್ತೆಯಲ್ಲಿರುವ ಹಿಂದೂಸ್ಥಾನಿ ಸಂಗೀತದ ಗಾನಸಾಮ್ರಾಜ್ಞಿ, ಸಂಗೀತ ಶಿರೋಮಣಿ, ಸಂಗೀತ ಕಲಾರತ್ನ, ಪದ್ಮವಿಭೂಷಣ ಪುರಸ್ಕೃತ ಡಾ.ಗಂಗೂಬಾಯಿ ಹಾನಗಲ್ ಅವರ ನಿವಾಸ ಶಿಥಿಲಗೊಂಡಿದೆ.ಸ್ಮಾರಕ ಕಟ್ಟಡವು ಹತ್ತೇ ವರ್ಷದಲ್ಲಿ ಪಾಳು ಬಿದ್ದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ, ಕನ್ನಡ & ಸಂಸ್ಕೃತಿ ಇಲಾಖೆಯ ಅಸಡ್ಡೆಗೆ ಹಿಡಿದ ಕೈಗನ್ನಡಿ. ಸಂಗೀತ ಕ್ಷೇತ್ರದ ಬೆಳವಣಿಗೆಗೆ ಇಡೀ ತಮ್ಮ ಜೀವನದುದ್ದಕ್ಕೂ ಸೇವೆಯನ್ನು ಸಲ್ಲಿಸಿ ನಮ್ಮ ನಾಡು ಹಾಗೂ ದೇಶದ ಕೀರ್ತಿಯನ್ನು ವಿಶ್ವವ್ಯಾಪಿ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗವ್ವರವರ ನಿವಾಸವನ್ನು ಸಂಪೂರ್ಣವಾಗಿ ನವೀಕರಿಸಿ ಅವರಿಗೆ ಗೌರವ ಸಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

