ಸ್ಯಾಂಡಲ್‌ವುಡ್‌ನಲ್ಲಿ ಫೇಮಸ್ ಆಗಿದ್ದ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ಮನೆಯಲ್ಲಿಯೇ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎಂದು ವರದಿಯಾಗಿದೆ.ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ತಮ್ಮ ಕುಟುಂಬದೊಂದಿಗೆ ಅವರು ವಾಸವಾಗಿದ್ದರು. 70 ವರ್ಷದ ಉಮೇಶ್ ಅವರ ಸ್ಥಿತಿ ಸದ್ಯ ಗಂಭೀರವಾಗಿದ್ದು, ಆಂಬುಲೆನ್ಸ್ ಮೂಲಕ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಅವರನ್ನು ಕುಟುಂಬಸ್ಥರು ಕರೆದುಕೊಂಡು ಬಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

