ತಂದೆಯೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ(Rape)ವೆಸಗಿರುವ ಅಮಾನವೀಯ ಘಟನೆ ಹರಿದ್ವಾರದ ಕಂಖಾಲ್ ಪ್ರದೇಶದಲ್ಲಿ ನಡೆದಿದೆ. 17 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ 60 ವರ್ಷದ ತಂದೆಯನ್ನು ಬಂಧಿಸಲಾಗಿದೆ. ಗರ್ಭಪಾತದ ಮಾತ್ರೆಗಳನ್ನು ನೀಡಿದ ಬಳಿಕ ಆಕೆಯ ಆರೋಗ್ಯ ತೀವ್ರ ಹದಗೆಟ್ಟಿತ್ತು ಆಗ ಮಾಹಿತಿ ಬೆಳಕಿಗೆ ಬಂದಿದೆ.ಗೆಳೆಯ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದ, ಇದರ ಪರಿಣಾಮವಾಗಿ ಎರಡು ಬಾರಿ ಬಲವಂತವಾಗಿ ಗರ್ಭಪಾತ ಮಾಡಿಸಲಾಗಿತ್ತು ಎಂಬುದು ತಿಳಿದುಬಂದಿದೆ. ತಂದೆ ಮತ್ತು ಗೆಳೆಯ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

