Breaking News

ಪಾಕ್‌ – ಅಪ್ಘಾನಿಸ್ತಾನ ನಡುವೆ ಘೋರ ಸಂಘರ್ಷ

ಉಗ್ರರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪರಸ್ಪರ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದ ನಡುವೆ ಶನಿವಾರದಿಂದೀಚೆಗೆ ಭಾರೀ ಸಂಘರ್ಷ ಆರಂಭವಾಗಿದೆ. ಪರಸ್ಪರ ಮೇಲಿನ ದಾಳಿಯಲ್ಲಿ ಉಭಯ ದೇಶಗಳ ಮುಂಚೂಣಿ ಸೇನಾ ಠಾಣೆಗಳು ಧ್ವಂಸಗೊಂಡಿವೆ.ಶನಿವಾರದಿಂದೀಚೆಗೆ ಮತ್ತಷ್ಟು ತೀವ್ರಗೊಂಡಿದೆ. ಅಫ್ಘಾನಿಸ್ತಾನದ 19 ಸೈನಿಕ ಹೊರಠಾಣೆ ಮತ್ತು ಉಗ್ರ ಅಡಗುತಾಣಗಳನ್ನು ವಶಪಡಿಸಿಕೊಂಡಿದ್ದಾಗಿ ಪಾಕಿಸ್ತಾನ ಹೇಳಿದೆ. ಅಲ್ಲದೆ 200ಕ್ಕೂ ಹೆಚ್ಚು ತಾಲಿಬಾನ್‌ ಹೋರಾಟಗಾರರು ಮತ್ತು ಅವರ ಬೆಂಬಲಿತ ಉಗ್ರರನ್ನು ಹತ್ಯೆ ಮಾಡಿದ್ದಾಗಿ ಹೇಳಿದೆ.

ಇನ್ನೊಂದೆಡೆ ತಾನು ನಡೆಸಿದ ದಾಳಿಯಲ್ಲಿ ಪಾಕ್‌ ಸೇನೆಯ 58 ಉಗ್ರರು ಸಾವನ್ನಪ್ಪಿದ್ದಾರೆ. ಇತರ 30 ಮಂದಿ ಗಾಯಗೊಂಡಿದ್ದಾರೆ. ಪಾಕ್‌ ಸೈನಿಕರಿಂದ ಹಲವಾರು ಶಸ್ತ್ರಾಸ್ತ್ರ ಮತ್ತು ಸೇನಾ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಡೂರಂಡ್‌ ರೇಖೆಯುದ್ದಕ್ಕೂ 20 ಭದ್ರತಾ ಠಾಣೆಗಳನ್ನು ಧ್ವಂಸಗೊಳಿಸಲಾಗಿದೆ

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *