ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ಪಡೆಗಳು ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆವರೆಗೆ ಭಾರಿ ಸಂಘರ್ಷ ನಡೆಸಿದ್ದು, ಗಡಿಯುದ್ದಕ್ಕೂ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ತಾನು ನಡೆಸಿದ ಪ್ರತೀಕಾರದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 58 ಸೈನಿಕರು ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನ ಹೇಳಿಕೊಂಡಿದೆ. ತನ್ನ 9 ಯೋಧರು ಹುತಾತ್ಮರಾಗಿರುವುದಾಗಿಯೂ ತಿಳಿಸಿದೆ.
ಆದರೆ, ಸಂಘರ್ಷದಲ್ಲಿ ತನ್ನ 23 ಯೋಧರು ಮೃತಪಟ್ಟಿರುವುದಾಗಿ ಪಾಕಿಸ್ತಾನ ಹೇಳಿದೆ. ಅಫ್ಗಾನಿಸ್ತಾನದ ಕಡೆಯಲ್ಲಿ ತಾಲಿಬಾನ್ ಹೋರಾಟಗಾರರು ಒಳಗೊಂಡಂತೆ 200ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

