ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವುದು ಘಟನೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.ಮದುವೆಯಾದ ಕೆಲ ದಿನಗಳಲ್ಲಿ ಪತಿಯಿಂದ ದೂರವಾದ ನೇತ್ರಾವತಿ ತವರು ಮನೆ ಸೇರಿದ್ದರು. ಹಿರಿಯರು ರಾಜಿ ಪಂಚಾಯಿತಿ ಮಾಡಿ ಇಬ್ಬರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ನೇತ್ರಾವತಿ ವಿಚ್ಚೇದನ ನೀಡಲು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಈ ಮಧ್ಯೆ ಮೂರು ದಿನಗಳ ಹಿಂದೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪತಿ ನವೀನ್ ವಿರುದ್ಧ ಕಿರುಕುಳದ ದೂರು ನೀಡಿದ್ದರು. ಪೊಲೀಸರು ದೂರು ಸ್ವೀಕರಿಸಿದ್ದರು.ಗಂಭೀರ ಗಾಯಗೊಂಡಿದ್ದ ನೇತ್ರಾವತಿ ಚಿಕ್ಕಮಗಳೂರು ನಗರದ ಮಲ್ಲೇಗೌಡ ರ್ಕಾ ರಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

